ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್

0
42

ನಾಗಮಂಗಲ (ಮಂಡ್ಯ): ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್ ಮೂಲಕ ಜನ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬಿಜಿಎಸ್‌ನಗರದಲ್ಲಿ ಬುಧವಾರ ಬೆಳಿಗ್ಗೆ ವಾಕಥಾನ್‌ ಕ್ಷಣ. ಹೃದಯದ ಕುರಿತಾಗಿ ಜಾಗೃತಿ ಮೂಡಿಸುವ ವಾಕ್‌ಥಾನ್‌ನಲ್ಲಿ ಸಚಿವ ಚಲುವರಾಯಸ್ವಾಮಿ, ನಟ ಧನ್ವೀರ್‌ ಜತೆ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಜೋರಾಗಿಯೇ ಹೆಜ್ಜೆ ಇಟ್ಟು ಉತ್ಸಾಹ ತುಂಬಿದರು. 12 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು. ಆಸ್ಪತ್ರೆಯ ಆವರಣದಿಂದ ಬೆಳ್ಳೂರು ಕ್ರಾಸ್ ಮಾರ್ಗವಾಗಿ ಆದಿಚುಂಚನಗಿರಿ ವಿಶ್ವವಿದ್ಯಾಲಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ ಮೂಲಕ 7 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದ ವಾಕಥಾನ್ ಜಾಥದಲ್ಲಿ ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಂದನಾಥ ಸ್ವಾಮೀಜಿ, ಶ್ರೀ ಶಂಭುನಾಥನಂದ ಸ್ವಾಮೀಜಿ, ಶ್ರೀ ಮಂಗಳನಾಥನಂದ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ: ಮೋಹನ್, ಚಲನಚಿತ್ರ ನಟ ಧನ್ವೀರ್ ಸಹಿತ ಹಲವರು ಹೆಜ್ಜೆ ಹಾಕಿದರು.

Previous articleಕ್ರಿಕೆಟ್‌ನಲ್ಲೂ ಕಾಂತಾರ ಹವಾ
Next articleಮಾಜಿ ಸಚಿವ ಡಿ.ಬಿ ಚಂದ್ರೇಗೌಡರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ