ಶತಕ ಸಂಭ್ರಮ: ನಾಡಿನ ಜನತೆಗೆ ಧನ್ಯವಾದ ಹೇಳಿದ ಸಿಎಂ

0
10

ಬೆಂಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಟ್ವೀಟ್‌ ಮಾಡಿರುವ ಅವರು “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ.
ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ.” ಎಂದಿದ್ದಾರೆ.

Previous articleನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ನೇಮಕ
Next articleಪಾರದರ್ಶಕ ತನಿಖೆಗೆ ನಮ್ಮ ಅಭ್ಯಂತರವಿಲ್ಲ