ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನ: ʼಸಂಭ್ರಮ ಶನಿವಾರ’

0
14

ಬೆಂಗಳೂರು: ಶಾಲೆಗಳಲ್ಲಿ ಬ್ಯಾಗ್ ರಹಿತ ದಿನ ಆಚರಣೆಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.

Previous articleನಾಡಿಗೆ ಬರ, ರಾಜಕಾರಣಕ್ಕೆ ಮುಂಗಾರು
Next articleಗೃಹಜ್ಯೋತಿ: ಒಂದು ಕೋಟಿ ಗ್ರಾಹಕರಿಂದ ನೋಂದಣಿ