Home ತಾಜಾ ಸುದ್ದಿ ಶಾಲೆಗೆ ಬರಲು ಮಕ್ಕಳಿಗೆ ಭಯ: ಕಟ್ಟಡ ನೆಲಸಮಗೊಳಿಸಲು ನಿರ್ಧಾರ

ಶಾಲೆಗೆ ಬರಲು ಮಕ್ಕಳಿಗೆ ಭಯ: ಕಟ್ಟಡ ನೆಲಸಮಗೊಳಿಸಲು ನಿರ್ಧಾರ

0

ಮೃತದೇಹಗಳನ್ನು ಇರಿಸಲಾಗಿದ್ದ ಶಾಲೆಗೆ ಬರಲು ಮಕ್ಕಳು ಭಯಪಡುತ್ತಿದ್ದಾರೆ. ಹೀಗಾಗಿ ಶಾಲೆಯನ್ನೇ ಕೆಡವಲು ಶಾಲಾ ಆಡಳಿತ ಮಂಡಳಿ ಮುಂದಾಗಿದೆ.
ಹೌದು.. ಈ ಘಟನೆ ನಡೆದಿದ್ದು ಓಡಿಶಾದಲ್ಲಿ. ಬಾಲಸೋರ್‌ನಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಇಲ್ಲಿನ ಸರ್ಕಾರಿ ಬಹನಾಗಾ ಪ್ರೌಢಶಾಲೆಯಲ್ಲಿ ತಾತ್ಕಾಲಿಕವಾಗಿ ಇರಿಸಲಾಗಿತ್ತು. ಇದರಿಂದಾಗಿ ಅನೇಕ ವಿದ್ಯಾರ್ಥಿಗಳು ಮತ್ತು ಪಾಲಕರು ಶಾಲೆಯ ಬಳಿ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಶಾಲಾ ಆಡಳಿತ ಮಂಡಳಿ ಶಾಲಾ ಕಟ್ಟಡ ನೆಲಸಮಗೊಳಿಸಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
ಬಾಲಸೋರ್ ಜಿಲ್ಲಾಧಿಕಾರಿ ದತ್ತಾತ್ರಯ ಭೌಸಾಹೇಬ್ ಶಿಂಧೆ ಗುರುವಾರ ಶಾಲಾ ಆಡಳಿತ ಸಮಿತಿ ಸದಸ್ಯರು, ಮುಖ್ಯೋಪಾಧ್ಯಾಯಿನಿ, ಶಾಲಾ ಸಿಬ್ಬಂದಿ ಹಾಗೂ ಸ್ಥಳೀಯರನ್ನು ಭೇಟಿ ಮಾಡಿದ್ದು, ನವೀಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

Exit mobile version