ಶಾಶ್ವತ ಟಾಸ್ಕ್‌ಫೋರ್ಸ್ ರಚನೆ ಮಾಡಿ

0
22
ಬೊಮ್ಮಾಯಿ

ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಶ್ವತ ಟಾಸ್ಕ್‌ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ ಒಂದು ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ.
ರೈತರು ಬಿತ್ತನೆ ಮಾಡಿದರೂ ಮೊಳಕೆ ಒಡೆಯದಿದ್ದರೆ ಅದಕ್ಕೆ ವಿಮೆ ಕೂಡ ಬರುವುದಿಲ್ಲ. ಹವಾಮಾನ ಇಲಾಖೆಯ ಮುನ್ಸೂಚನೆ ನಂಬಿ ಕೂಡಬೇಡಿ, ಅವರು ಮುಂದಿನ‌ ಐದು ದಿನ ನಿರಂತರ ಮಳೆ ಅಂತ ಹೇಳಿದ್ದಾರೆ. ಆದರೆ, ಎಲ್ಲ ಕಡೆ ನಿರ್ದಿಷ್ಟ ಮಳೆ ಆಗುತ್ತಿಲ್ಲ. ನೀವು ವಾಸ್ತವ ನೋಡಿ ಕೆಲಸ ಮಾಡಬೇಕು. ಅದಕ್ಕಾಗಿ ಶಾಸ್ವತ ಟಾಸ್ಕ್‌ಫೋರ್ಸ್ ರಚನೆ ಮಾಡಬೇಕು. ಅಲ್ಲದೇ ಪ್ರತಿ ಜಿಲ್ಲೆಗೂ ತಕ್ಷಣ ಐವತ್ತು ಲಕ್ಷ ರೂ.‌ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

Previous articleಎಚ್‌ಡಿಕೆ ಹಿಟ್ ಅಂಡ್ ರನ್ ಮಾಡ್ತಾರೆ
Next articleರಾಜ್ಯ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ