ಶಾಸಕರಿಗೆ ಅನುದಾನ ಕೊಡಲು ಸಾಧ್ಯವಿಲ್ಲ

0
7

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಬೇಕಾಗಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಸಕರು ಭಾರಿ ಆಸೆಯಲ್ಲಿದ್ದಾರೆ. ನಾವು ಕ್ಷೇತ್ರದ ಜನರಿಗೆ ಆ ಭರವಸೆ ಕೊಟ್ಟಿದ್ದೇವೆ, ಈ ಭರವಸೆಗಳನ್ನು ಈಡೇರಿಸಲು ಅನುದಾನಗಳನ್ನು ಕೊಡಿ ಎಂದು ಕೇಳುತ್ತಿದ್ದಾರೆ. ಆದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಬೇಕಾಗಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲ. ಎಲ್ಲ ಶಾಸಕರೂ ಕೂಡ ತಡೆದುಕೊಳ್ಳಬೇಕು. ಅನುದಾನಕ್ಕಾಗಿ ಒಂದು ವರ್ಷ ಕಾಯುವುದು ಅನಿವಾರ್ಯ ಎಂದಿದ್ದಾರೆ.

Previous articleಡ್ಯಾಮೇಜ್ ಕಂಟ್ರೊಲ್‌ಗೆ ಸಿಂಗಪುರ ಕಥೆ
Next articleಮಲೆನಾಡಿನ ಬೇಸಾಯ ವಿಜಯಪುರದಲ್ಲೂ ಆಗಬೇಕು