ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲು

0
21
ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲು ಮಾಡಿದ್ದರು. ದೂರಿನ ಮೇರೆಗೆ ಇದೀಗ ಎಫ್​ಐಆರ್ ದಾಖಲಾಗಿದ್ದು. ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

Previous articleಹುಬ್ಬಳ್ಳಿಯಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆ
Next articleಮುನಿಗಳ ಡೈರಿಯ ಹಿಂದೆ ಬಿದ್ದ ಖಾಕಿಪಡೆ