ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್​ಐಆರ್

0
27
ರೇಣುಕಾಚಾರ್ಯ

ಬೆಂಗಳೂರು: ಬೆಂಗಳೂರಿನ ಗುರುರಾಜ್ ಕಲ್ಯಾಣ ಮಂಟಪದಲ್ಲಿ ರೇಣುಕಾಚಾರ್ಯ ಕ್ಷೇತ್ರದ ಕಾರ್ಯಕರ್ತರ ಜೊತೆ ನಡೆಸುತ್ತಿದ್ದ ಸಭೆ ವೇಳೆಯೇ ಚುನಾವಣಾ ಅಧಿಕಾರಿಗಳು ದಾಳಿ ಮಾಡಿದ್ದರು. ರೇಣುಕಾಚಾರ್ಯ ಸ್ಟೇಜ್ ಮೇಲೆ ಮಾತನಾಡುತ್ತಿದ್ದ ವೇಳೆಯೇ ಅಧಿಕಾರಿಗಳು ಮೈಕ್ ಕಸಿದುಕೊಂಡು ಕಾರ್ಯಕ್ರಮ ನಿಲ್ಲಿಸಿದ್ದರು. ಈ ಸಂಬಂಧ ಇದೀಗ ರೇಣುಕಾಚಾರ್ಯ ವಿರುದ್ಧ ದೂರು ದಾಖಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಪಡೆಯದೇ ಇದೇ ಏಪ್ರಿಲ್​ 2ರಂದು ಬೆಂಗಳೂರಿನ ಶಿವಾನಂದ ಸರ್ಕಲ್​ ಬಳಿ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ರೇಣುಕಾಚಾರ್ಯ ಅವರು ಹೊನ್ನಾಳಿ ಕ್ಷೇತ್ರದ ಜನರೊಂದಿಗೆ ಸಭೆ ನಡೆಸಿದ್ದರು.

Previous articleಹಿರಿಯ ಕಾಂಗ್ರೆಸ್ ನಾಯಕ ದಿ. ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ
Next articleಪತಿ ಚಾಕೊಲೆಟ್ ತಂದುಕೊಡಲಿಲ್ಲವೆಂದು ಪತ್ನಿ ನೇಣು ಬಿಗಿದು ಆತ್ಮಹತ್ಯೆ!