ಶಾ ಭರ್ಜರಿ ರೋಡ್‌ ಶೋ

0
40

ಚಾಮರಾಜನಗರ: ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ರಾಜ್ಯದಲ್ಲಿಂದು ಭರ್ಜರಿ ರೋಡ್‌ ಶೋ ನಡೆಸಿದರು.
ಗುಂಡ್ಲುಪೇಟೆಯಲ್ಲಿಂದು ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್.ನಿರಂಜನಕುಮಾರ್ ಪರ ರೋಡ್ ಶೋ ನಡೆಸಿದರು. ರಾಷ್ಟ್ರೀಯ ಹೆದ್ದಾರಿ-766ರ ಮಡಹಳ್ಳಿ ವೃತ್ತದಿಂದ ಆರಂಭವಾದ ರೋಡ್ ಶೋ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ, ಅಂಚೆ ಕಚೇರಿ, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಮೂಲಕ ಸಾಗಿ ಹಳೇ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು ನಂತರ ಮುಕ್ತಾಯ ಗೊಂಡಿತು.
ರೋಡ್ ಶೋದಲ್ಲಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್.ನಿರಂಜನಕುಮಾರ್, ಕಾಡಾ ಅಧ್ಯಕ್ಷ ನಿಜಗುಣರಾಜು, ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್ ಸೇರಿದಂತೆ ಬಿಜೆಪಿ ಪ್ರಮುಖರು ಭಾಗವಹಿಸಿದ್ದರು.

Previous articleನಾಮಪತ್ರ ವಾಪಸ್
Next articleನಾಮಪತ್ರ ವಾಪಸ್‌ ಪಡೆದು ನಾಪತ್ತೆಯಾದ ಜೆಡಿಎಸ್‌ ಅಭ್ಯರ್ಥಿ