ಶಿವಮೊಗ್ಗ ವಿಮಾನ ನಿಲ್ದಾಣ: ಆಗಸ್ಟ್ 11 ರಿಂದ ವಿಮಾನ ಹಾರಾಟ

0
28

ಶಿವಮೊಗ್ಗ: ವಿಮಾನ ನಿಲ್ದಾಣ ಜುಲೈ 20ರೊಳಗೆ ಸಜ್ಜಾಗಿಲಿದೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ರಾಜ್ಯ ಸರ್ಕಾರದಿಂದ ನಿರ್ವಹಣೆಯಾಗಲಿರುವ ಮೊಟ್ಟಮೊದಲ ವಿಮಾನ ನಿಲ್ದಾಣ ಶಿವಮೊಗ್ಗ ಏರ್ ಪೋರ್ಟನ್ನು ಜುಲೈ 20ರ ವೇಳೆಗೆ ಸಜ್ಜಗೊಳಿಸಿ, ಆಗಸ್ಟ್ 11ರಿಂದ ವಿಮಾನ ಹಾರಾಟ ಆರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ವೇಳೆ ನಿರ್ಮಾಣ ಹಂತದಲ್ಲಿರುವ ವಿಜಯಪುರ, ಹಾಸನ, ರಾಯಚೂರು ಮತ್ತು ಕಾರವಾರ ವಿಮಾನ ನಿಲ್ದಾಣಗಳ ಪ್ರಗತಿಯ ಕುರಿತು ಚರ್ಚಿಸಿ, ಸೂಕ್ತ ನಿರ್ದೇಶನ ನೀಡಿದ್ದಾರೆ. ಸಭೆಯಲ್ಲಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಾದ ಶ್ರೀ ಗೌರವ್ ಗುಪ್ತ, #KSIIDC ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಂ.ಆರ್.ರವಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಪ್ರಕಾಶ್ ಉಪಸ್ಥಿತರಿದ್ದರು.

Previous articleಪರಿಷತ್​ ಕಲಾಪದಲ್ಲಿ ʻಹನಿಮೂನ್‌ʼ ಹಾಸ್ಯ
Next articleಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ಗೆ ಧರ್ಮಸ್ಥಳ ಧರ್ಮಾಧಿಕಾರಿ ಮೆಚ್ಚುಗೆ