ಶಿವಸೇನೆ ಸಂಸದರಿಗೆ ಗಡಿ ಪ್ರವೇಶಕ್ಕೆ ನಿರ್ಬಂಧ

0
23

ಬೆಳಗಾವಿ: ಎಂಇಎಸ್ ಆಯೋಜಿಸಿದ್ದ ಹುತಾತ್ಮ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದ ಶಿವಸೇನೆ ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಗಡಿ ಪ್ರವೇಶ ನಿರ್ಬಂಧ ವಿಧಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರದ ಗಡಿ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಧೈರ್ಯಶೀಲ ಮಾನೆ, ಬೆಳಗಾವಿಗೆ ಆಗಮಿಸಿ, ಪ್ರಚೋದನಾತ್ಮಕ ಭಾಷಣ ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹೇರಿ ಸೋಮವಾರ ರಾತ್ರಿ ಆದೇಶ ಹೊರಡಿಸಿ ಎಂಇಎಸ್‌ಗೆ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ.
ಗಡಿ ವಿವಾದ ಹೋರಾಟದಲ್ಲಿ ಗಲಭೆ ಸೃಷ್ಟಿಸಿ ಗೋಲಿಬಾರ್‌ಗೆ ಮೃತರಾದವರ ಸ್ಮರಣಾರ್ಥ ಕಾರ್ಯಕ್ರಮ ಪ್ರತಿ ವರ್ಷ ನಡೆಯುತ್ತದೆ. ಹೀಗಾಗಿ ಬೆಳಗಾವಿಯ ಹುತಾತ್ಮ ಚೌಕ್‌ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಶಿವಸೇನೆ ಠಾಕ್ರೆ ಬಣ ಸಾಥ್ ನೀಡಿದ್ದು, ಎಂಇಎಸ್‌ನಿಂದ ಪ್ರಚೋದನಾತ್ಮಕ ಭಾಷಣ ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಕ್ರಮ ಜರುಗಿಸಿದ್ದಾರೆ.

Previous articleವೇಶ್ಯೆಯರಂತೆ ಮಾರಾಟವಾದ ಶಾಸಕರು: ಬಿ.ಕೆ. ಹರಿಪ್ರಸಾದ್
Next articleರಾಜಕಾರಣಿಗಳು ಮಾದರಿಯಾಗಿರಬೇಕು: ಹೊರಟ್ಟಿ