ಸಂಪುಟದ ತೀರ್ಮಾಣಕ್ಕೆ ಕಾದು ನೊಡೋಣ: ಬಸವರಾಜ ಬೊಮ್ಮಾಯಿ

0
17
CM

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಸಂಪುಟದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ ಕಾದು ನೋಡೊಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು ಮುಖ್ಯಮಂತ್ರಿಗಳು ಸಭೆಗಳನ್ನು ಮಾಡಲಿ, ನಾಳೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಗೊತ್ತಾಗಲಿದೆ ಯಾವುದು ಕೊಡುತ್ತಾರೆ ಯಾವುದು ಇಲ್ಲ, ಏನು ಕಂಡಿಷನ್ ಹಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದರು.
ಡಿಸಿಎಂ ಡಿ. ಕೆ. ಶಿವಕುಮಾರ್ ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬೇಟಿ ಮಾಡಿರುವುದು ಅವರ ಪಕ್ಷದ ವಿಚಾರ ಎಂದರು. ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸಮಿತಿ ಮಾಡುವುದಾಗಿ ಹೇಳಿದ್ದಾರೆ. ಏನು ಬದಲಾವಣೆ ಮಾಡುತ್ತಾರೆ ಎಂದು ಕಾದು ನೋಡೊಣ ಎಂದು ಹೇಳಿದರು.

Previous articleಜೂನ್​ 15ರವರೆಗೆ ವಿದ್ಯಾರ್ಥಿಗಳ ಬಸ್​ ಪಾಸ್​ ಅವಧಿ ವಿಸ್ತರಣೆ
Next articleಶೆಟ್ಟರ್ ಮನೆ ಮೇಲೆ ಲೋಕಾಯುಕ್ತ ದಾಳಿ