ಸಚಿವ ಉಮೇಶ ಕತ್ತಿ ನಿಧನಕ್ಕೆ ಮಾಜಿ ಸಿಎಂ ಶೆಟ್ಟರ್ ಸಂತಾಪ

0
19

ಹುಬ್ಬಳ್ಳಿ: ಆಹಾರ, ನಾಗರಿಕ ಸರಬರಾಜು ಹಾಗೂ ಅರಣ್ಯ ಸಚಿವ ಉಮೇಶ ಕತ್ತಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉಮೇಶ ಕತ್ತಿ ಅವರು ರಾಜ್ಯದ ರಾಜಕಾರಣದಲ್ಲಿ ತಮ್ಮ ಕ್ರಿಯಾಶೀಲತೆ,ನೇರ,ನಿಷ್ಠುರತೆ ಹೆಸರಾಗಿದ್ದರು. ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು.ಅವರ ಅಕಾಲಿಕ ಅಗಲಿಕೆಯ ದುಃಖ‌ ಭರಿಸುವ ಶಕ್ತಿ ಕುಟುಂಬ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಬರಲಿ ಎಂದು ಮಾಜಿ ಸಿಎಂ ಶೆಟ್ಟರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Previous articleಅರಣ್ಯ ಸಚಿವ ಉಮೇಶ ಕತ್ತಿ ನಿಧನ
Next articleಇಂದು ಎನಗೆ ಗೋವಿಂದ….