Home ತಾಜಾ ಸುದ್ದಿ ಸರ್ಕಾರದ ಆದ್ಯತೆಯಂತೆ ಚುರುಕಾಗಿ ಕಾರ್ಯ ಮಾಡಿ

ಸರ್ಕಾರದ ಆದ್ಯತೆಯಂತೆ ಚುರುಕಾಗಿ ಕಾರ್ಯ ಮಾಡಿ

0
Minister Krishna Byregowda briefing the media persons at Vidhana Soudha in Bengaluru on Thursday. -KPN ### Krishna Byregowda media briefing

ಬೆಳಗಾವಿ: ಸರಕಾರದ ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆಯಿಂದ ಹಾಗೂ ಚುರುಕಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೂಚನೆ ನೀಡಿದರು.
ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಂದಾಯ ಇಲಾಖೆಯ ಮೇಲೆ ಹೆಚ್ಚಿನ ಹೊಣೆಗಾರಿಕೆ ಇರುತ್ತದೆ. ಇವೆಲ್ಲವುಗಳ ಜತೆಗೆ ಕಂದಾಯ ಇಲಾಖೆಯ ಕೆಲಸಗಳು ಕುಂಠಿತಗೊಳ್ಳಬಾರದು ಎಂದು ಹೇಳಿದರು. ಸರಕಾರಕ್ಕೆ ಒಳ್ಳೆಯ ಹೆಸರು ತರುವುದು ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ಅವಲಂಬಿಸಿರುತ್ತದೆ. ಆದ್ದರಿಂದ ಎಲ್ಲರೂ ಉತ್ತಮ ಆಡಳಿತ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನಪರ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಅದರಲ್ಲೂ ಕಂದಾಯ ಇಲಾಖೆಯ ಪಾತ್ರ ಮಹತ್ವದ್ದು. ಆದ್ದರಿಂದ ಜನರಿಗೆ ಅನುಕೂಲವಾಗುವಂತಹ ಕೆಲಸ ಮಾಡಲು ಸರಕಾರಕ್ಕೆ ಸಹಕರಿಸಬೇಕು ಎಂದರು.
ಪ್ರತಿ ತಿಂಗಳು ಕಂದಾಯ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಲಾಗುವುದು. ಆದ್ದರಿಂದ ಉತ್ತಮ ಆಡಳಿತ ನೀಡುವ ದಿಸೆಯಲ್ಲಿ ಎಲ್ಲರೂ ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

Exit mobile version