Home ತಾಜಾ ಸುದ್ದಿ ಸರ್ವರ್ ಗುಣಮಟ್ಟ ಹೆಚ್ಚಿಸಿ ಶೀಘ್ರದಲ್ಲೇ ನೋಂದಣಿ ಕಾರ್ಯ ಆರಂಭ

ಸರ್ವರ್ ಗುಣಮಟ್ಟ ಹೆಚ್ಚಿಸಿ ಶೀಘ್ರದಲ್ಲೇ ನೋಂದಣಿ ಕಾರ್ಯ ಆರಂಭ

0

ಬೆಳಗಾವಿ: ಸರ್ವರ್ ಸಮಸ್ಯೆಯಿಂದ ‘ಗೃಹ ಜ್ಯೋತಿ’ ನೋಂದಣಿಯಲ್ಲಿ ಸ್ವಲ್ಪ ವಿಳಂಬವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಗೃಹ ಲಕ್ಷ್ಮಿ’ ಯೋಜನೆಯ ನೋಂದಣಿಗೆ ಸರ್ವರ್ ಗುಣಮಟ್ಟ ಹೆಚ್ಚಿಸಿ ಶೀಘ್ರದಲ್ಲೇ ನೋಂದಣಿ ಕಾರ್ಯ ಆರಂಭಿಸಲಾಗುವುದು ಎಂದರು ಇನ್ನು ಅನ್ನ ಭಾಗ್ಯ ಯೋಜನೆ ಕುರಿತು ಮಾತನಾಡಿದ ಅವರು ಕೇಂದ್ರ ಸರ್ಕಾರಕ್ಕೆ ಕಣ್ಣು ಕಿವಿ ಹಾಗೂ ಹೃದಯವಂತೂ ಮೊದಲೇ ಇಲ್ಲ, ‘ಕೇಂದ್ರಕ್ಕೆ ಬಿಸಿ ಮುಟ್ಟುತ್ತೊ ಇಲ್ವೊ, ಆಮೇಲೆ ನೋಡೋಣ. ಮೊದಲು 25 ಜನ ಸಂಸದರು ಕಣ್ಣು ತೆಗೆಯಲಿ ಒಂದು ವರ್ಷದಲ್ಲಿ ಪಾರ್ಲಿಮೆಂಟ್ ಚುನಾವಣೆ ಬಂದಿದೆ. ಮಹಾಜನತೆ ಅರ್ಥ ಮಾಡ್ಕೊಳಲಿ ಚುನಾವಣೆ ಬಂದಾಗ ಜನರ ಓಲೈಕೆಗೆ ಬರ್ತಾರೆ. ಆದರೆ, ಇವತ್ತು ಬಡವರಿಗೆ ನೀಡಬೇಕಾದ ಅಕ್ಕಿಯನ್ನು ತಡೆಯುತ್ತಿದ್ದಾರೆ ಎಂದು ಕಿಡಿಕಾರಿದರು.

Exit mobile version