ಮಹಾರಾಷ್ಟ್ರ: ಶಿರಡಿಯಲ್ಲಿರುವ ಶ್ರೀ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ 2018ರಲ್ಲಿ ಪ್ರಧಾನಿ ಮೋದಿ ಅವರೇ ಶಂಕುಸ್ಥಾಪನೆ ಮಾಡಿದ್ದ ದರ್ಶನ ಕ್ಯೂ ಕಾಂಪ್ಲೆಕ್ಸ್ ಇಂದು ಉದ್ಘಾಟಿಸಿದರು. ಶಿರಡಿ ದೇವಸ್ಥಾನದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಭಕ್ತರ ಸಾಲು ಹಾದಿಯ ಉದ್ಘಾಟನೆ, ನಿಲವಂದೆ ಅಣೆಕಟ್ಟೆಯಲ್ಲಿ ಜಲಪೂಜೆ ಮತ್ತು ಅಣೆಕಟ್ಟೆಯ ಕಾಲುವೆಯ ಜಾಲದ ಲೋಕಾರ್ಪಣೆ ಸೇರಿದಂತೆ ಆರೋಗ್ಯ, ರೈಲು, ರಸ್ತೆ, ತೈಲ ಮತ್ತು ಅನಿಲದಂತಹ ವಲಯಗಳಲ್ಲಿ ಸುಮಾರು 7,500 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು.
ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಮೋದಿ ಜತೆ ದೇವಸ್ಥಾನಕ್ಕೆ ಆಗಮಿಸಿದ್ದರು.