ಬೆಳಗಾವಿ: ಸಿಎಂ ಮತ್ತು ಡಿಸಿಎಂ ಇಬ್ಬರೂ ಚಪ್ಪಲಿಯಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಇಬ್ಬರ ನೇತೃತ್ವದ ಸರ್ಕಾರ ಬಹಳ ದಿನ ನಡೆಯುವುದಿಲ್ಲ. ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಇಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಎಂದರು.
ಇನ್ನು ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಏನ್ ಹೇಳಿದರೂ ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ ದನ ಕಾಯುತ್ತಿಲ್ಲ ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.