Home ತಾಜಾ ಸುದ್ದಿ ಸಿಎಂ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮನ

ಸಿಎಂ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮನ

0

ಬೆಂಗಳೂರು: ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಮೊದಲ ಬಾರಿಗೆ ವಿಧಾನಸೌಧ ಪ್ರವೇಶ ಮಾಡಿದರು. ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಎಂಟು ಜನ ಸಚಿವರು ವಿಧಾನಸೌಧಕ್ಕೆ ಆಗಮಿಸಿದರು.
ಒಂದೇ ಕಾರಿನಲ್ಲಿ ಸಿಎಂ, ಡಿಸಿಎಂ ಆಗಮಿಸಿದ್ದು, ಡಿ.ಕೆ. ಶಿವಕುಮಾರ ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಒಳಗೆ ನಡೆದರು. ಇನ್ನು ಕೆಲವೇ ಗಂಟೆಗಳಲ್ಲಿ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಐದು ಗ್ಯಾರಂಟಿಗಳ ಜಾರಿಗೆ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುತ್ತದೆ.

Exit mobile version