Home ನಮ್ಮ ಜಿಲ್ಲೆ ಉಡುಪಿ ಸಿದ್ದರಾಮಯ್ಯ ಅವರಿಗೆ 6 ಪ್ರಶ್ನೆಗಳನ್ನು ಹಾಕಿದ ಕರ್ನಾಟಕ ಬಿಜೆಪಿ

ಸಿದ್ದರಾಮಯ್ಯ ಅವರಿಗೆ 6 ಪ್ರಶ್ನೆಗಳನ್ನು ಹಾಕಿದ ಕರ್ನಾಟಕ ಬಿಜೆಪಿ

0

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ ಈ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿ 6 ಪ್ರಶ್ನೆಗಳನ್ನು ಕೇಳಿದೆ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಅವರು “ಪೊಡವಿಗೊಡೆಯ ಶ್ರೀ ಕೃಷ್ಣನ ಸನ್ನಿಧಾನ-ಉಡುಪಿಗೆ ಭೇಟಿ ನೀಡುವ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸುತ್ತಾರಾ..?

1⃣ ಉಡುಪಿ ಕಾಲೇಜಿನ ಘಟನೆಯನ್ನು ಸಿದ್ದರಾಮಯ್ಯ ಸರ್ಕಾರ ತಿರುಚಲು ಪ್ರಯತ್ನಿಸಿದ್ದು ಏಕೆ..?

2⃣ ಉಡುಪಿಯ ಕಾಲೇಜಿನ ಪ್ರಕರಣದ ಸಾಕ್ಷಿಯನ್ನು ನಾಶಗೊಳಿಸಲು ಪೊಲೀಸರ ಮೇಲೆ ಒತ್ತಡ ತಂದದ್ದು ಸರಿಯೇ..?

3⃣ ರಾತ್ರೋರಾತ್ರಿ ಸಾಮಾಜಿಕ ಕಾರ್ಯಕರ್ತೆಯ ಮನೆಗೆ ಪೊಲೀಸರನ್ನು ನುಗ್ಗಿಸಿದ್ದು ಏಕೆ..?

4⃣ ಉಡುಪಿ ಘಟನೆಯ ತಪ್ಪಿತಸ್ಥರು ಹಾಗೂ ಅವರ ಪ್ರೇರಕ ಶಕ್ತಿಗಳ ಗಡಿಪಾರು ಯಾವಾಗ..?

5⃣ ಉಡುಪಿ ಪ್ರಕರಣದ ತನಿಖೆಯನ್ನು ಎಸ್.ಐ.ಟಿ ಗೆ ವಹಿಸದಿರಲು ಪ್ರಮುಖ ಕಾರಣವೇನು..?

6⃣ ಖುದ್ದು ಸಂಪೂರ್ಣ ಸರ್ಕಾರವೇ ಭಾಗಿಯಾಗಿ ಈ ಪ್ರಕರಣದ ದಿಕ್ಕನ್ನು ತಪ್ಪಿಸುತ್ತಿರುವುದು ಯಾರನ್ನು ರಕ್ಷಿಸುವುದಕ್ಕಾಗಿ..?

ಜಿಹಾದಿ ಮತ್ತು ನಿಷೇಧಿತ ಸಂಘಟನೆಗಳನ್ನು ಪೋಷಿಸುತ್ತಿರುವುದು ಅವರ ಮೇಲಿನ ಭಯದ ಕಾರಣಕ್ಕೋ ಅಥವಾ ಅವರ ಮೇಲಿನ ವಾತ್ಸಲ್ಯಕ್ಕೋ..? ಎಂದು ಪ್ರಶ್ನಸಿದ್ದಾರೆ.

Exit mobile version