ಸಿ.ಟಿ.ರವಿ ದಿಢೀರ್‌ ಆಸ್ಪತ್ರೆಗೆ ದಾಖಲು

0
21
ಸಿ.ಟಿ. ರವಿ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.
ಅನಾರೋಗ್ಯದ ನಡುವೆಯೂ ಚಿಕ್ಕಮಗಳೂರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಿ ಟಿ ರವಿ ಚುನಾವಣಾ ಪ್ರಚಾರ ನಡೆಸಿದ್ದರು

Previous article107ನೇ ವಯಸ್ಸಿನಲ್ಲೂ ಕುಂದದ ಮತದಾನದ ಉತ್ಸಾಹ
Next article‘ಎಕ್ಸಿಟ್ ಪೋಲ್’ ಲೆಕ್ಕಾಚಾರ ಉಲ್ಟಾ ಬಿಜೆಪಿಗೆ ಸ್ಪಷ್ಟ ಬಹುಮತ: ಸಿಎಂ ವಿಶ್ವಾಸ