ಸುಪ್ರೀಂ ತೀರ್ಪು ಖಂಡಿಸಿ ಕಾವೇರಿ ನದಿಗಿಳಿದು ಪ್ರತಿಭಟನೆ

0
27

ಶ್ರೀರಂಗಪಟ್ಟಣ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಬಿಡಲು ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಖಂಡಿಸಿ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಕಾವೇರಿ ನದಿಗಿಳಿದು ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾದ್ಯಕ್ಷ ಕೆಂಪೂಗೌಡ, ತಾಲೂಕು ಅಧ್ಯಕ್ಷ ಮರಳಗಾಲದ ಕೃಷ್ಣೇಗೌಡ ನೇತೃತ್ವದಲ್ಲಿ ಪಟ್ಟಣದ ಸ್ನಾನಘಟ್ಟದ ಬಳಿ ಕಾವೇರಿ ನದಿಗಿಳಿದ ರೈತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ನಡುಗಡ್ಡೆ ಮಧ್ಯ ಕುಳಿತು ಪ್ರಾದಿಕಾರ, ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೆಆರ್‌ಎಸ್ ಜಲಾಶಯದಲ್ಲಿ ನೀರಿಲ್ಲದಿದ್ದರೂ ನ್ಯಾಯ ಮಂಡಳಿಗಳು ಪರಿಶೀಲನೆ ಮಾಡದ ಏಕಾಏಕಿ ನೀರು ಬಿಡಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ದಬ್ಬಾಳಿಕೆ ಮಾಡುತ್ತಿದೆ. ರಾಜ್ಯದಲ್ಲಿ ರೈತರು ಬದುಕಬೇಕೋ ಅಥವಾ ಸಾಯೊಬೇಕೋ ಎಂಬ ಚಿಂತೆ ಎದುರಾಗುತ್ತಿದೆ. ಜಲಾಶಯದಲ್ಲಿ ನೀರಿಲ್ಲದಿದ್ದರೂ ನೀರು ಬಿಡುವಂತೆ ಆದೇಶಿಸಿರುವ ಸುಪ್ರೀಂ ಕೋಟ ಅದೇಶವನ್ನು ಧಿಕ್ಕರಿಸಿ ಘೋಷಣೆಗಳ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು ಎರಡು ಗಂಟೆಗಳ ಕಾಲ ನದಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಅವರನ್ನು ಪೊಲೀಸರು ಮನವೊಲಿಸಿ ಹೊರ ಬರುವಂತೆ ಮನವಿ ಮಾಡಿದರು. ನಂತರ ಸ್ನಾನದಘಟ್ಟದ ದಡದಲ್ಲಿ ಕುಳಿತು ರೈತರು ಪ್ರತಿಭಟನೆ ಮುಂದುವರೆಸಿದರು.

Previous articleಸುಪ್ರೀಂ ತೀರ್ಪು ಖಂಡಿಸಿ ಅಣೆಕಟ್ಟೆ ಮುತ್ತಿಗೆಗೆ ಯತ್ನ
Next articleಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧ ಇಲ್ಲ