ಸುರಕ್ಷಿತ ಕರ್ನಾಟಕಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೆ

0
26

ಹುಬ್ಬಳ್ಳಿ: ಈ ಬಾರಿ ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ. ಸುರಕ್ಷಿತ, ವಿಕಸಿತ ಮತ್ತು ರಾಜಕೀಯ ಸ್ಥಿರತೆಯುಳ್ಳ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕನಿಷ್ಠ ೧೪೦ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ವ್ಯಕ್ತಪಡಿಸಿದರು.
ಸೋಮವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರಗಳು ಅಧಿಕಾರದಲ್ಲಿದ್ದರೆ ಏನೇನು ಅನುಕೂಲತೆಗಳು ಆಗುತ್ತವೆ. ಅಭಿವೃದ್ಧಿ ಸಾಧ್ಯ ಎಂಬುದನ್ನು ಕರ್ನಾಟಕ ಜನರು ಮನಗಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಮುಸ್ಲಿಂ ತುಷ್ಟೀಕರಣ ನೀತಿಗೆ ಜನರಲ್ಲಿ ಆಕ್ರೋಶವಿದೆ. ಇಷ್ಟು ವರ್ಷಗಳ ಕಾಲ ಕಾಂಗ್ರೆಸ್ ಅನುಸರಿಸಿಕೊಂಡು ಬಂದ ಮುಸ್ಲಿಂ ತುಷ್ಟೀಕರಣ ನೀತಿ ಇನ್ನು ಮುಂದೆ ನಡೆಯಲ್ಲ. ಜನರು ಪ್ರಜ್ಞಾವಂತರಾಗಿದ್ದಾರೆ. ಅಭಿವೃದ್ಧಿಪರ ಇರುವ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಹೀಗಾಗಿ, ಕರ್ನಾಟಕದಲ್ಲಿ ಈ ಬಾರಿ ಪೂರ್ಣ ಬಹುಮತದ ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದರು.

Previous articleಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತವನ್ನು ನಿಯತ್ತಾಗಿ ಒಪ್ಪಿ ಪಕ್ಷಕ್ಕೆ ಬರುವವರನ್ನು ನಾವು ಸ್ವಾಗತಿಸುತ್ತೇವೆ
Next articleಧರ್ಮದ ಆಧಾರದ ಮೇಲೆ ಮೀಸಲಾತಿ ನಿಗದಿ ಅಸಾಧ್ಯ