ಸೇ-ಸಿಎಂ ಹೆಸರಿನಲ್ಲಿ ಮತ್ತೊಂದು ಅಭಿಯಾನ

0
56
ಸೇ-ಸಿಎಂ

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನ ಯಶಸ್ವಿಯಾದ ಬೆನ್ನಲ್ಲಿಯೇ ಕಾಂಗ್ರೆಸ್‌ ಇದೀಗ ಸೇ-ಸಿಎಂ ಹೆಸರಿನಲ್ಲಿ ಮತ್ತೊಂದು ಅಭಿಯಾನ ಆರಂಭಿಸಿದೆ.
ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, PayCM ಈಗ SayCM ಆಗಲಿ, ರಾಜ್ಯದ ಜನತೆಗೆ ಉತ್ತರ ನೀಡಲಿ. ಚುನಾವಣೆಗೂ ಮೊದಲು ನೀಡಿದ ಭರವಸೆಗಳನ್ನು ಮರೆತು ವಚನಭ್ರಷ್ಟವಾದ ಬಿಜೆಪಿ ರಾಜ್ಯದ ಜನತೆಗೆ ಉತ್ತರ ನೀಡಬೇಕಿದೆ. ತಮ್ಮದೇ ಪಕ್ಷದ ಪ್ರಣಾಳಿಕೆಯ ಭರವಸೆಗಳ ಬಗ್ಗೆ ಮಾತಾಡಲು ಕೂಡ 40% ಕಮಿಷನ್ ನೀಡಬೇಕೆ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಪ್ರಶ್ನಿಸಿದೆ.

Previous articleರಾಜ್ಯ ನೇಮಕಾತಿಗಳಲ್ಲಿ ಮೋಸ, ವಂಚನೆ: ಶಂಕರ್ ಬಿದರಿ
Next articleಅರುಣ್ ಸಿಂಗ್‌ ಅವರಿಗೆ ತಾಕೀತು ಮಾಡಿ: ಸ್ವಾಮೀಜಿ