Home ತಾಜಾ ಸುದ್ದಿ ಸೋತರೂ ಗೌರವದಿಂದ ನೋಡಿಕೊಳ್ಳುತ್ತಿದ್ದಾರೆ

ಸೋತರೂ ಗೌರವದಿಂದ ನೋಡಿಕೊಳ್ಳುತ್ತಿದ್ದಾರೆ

0

ಸೋತರೂ ಕಾಂಗ್ರೆಸ್​ನವರು ಗೌರವದಿಂದ ನೋಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಅವರಿಗೆ ಕಾಂಗ್ರೆಸ್ ಇಂದು ವಿಧಾನಪರಿಷತ್ ಸದಸ್ಯ ಸ್ಥಾನವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯಲ್ಲಿ ಗೌರವದಿಂದ ನಡೆಸಿಕೊಂಡಿಲ್ಲ ಎಂದು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಅಂದೇ ಹೇಳಿದ್ದೆ. ಆದರೆ, ಮೂರು ಎಂಎಲ್​ಸಿ ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಅವಕಾಶ ನನಗೆ ಕೊಟ್ಟಿದ್ದಾರೆ. ಕಾಂಗ್ರೆಸ್​ನ ಹಿರಿಯರು ನನ್ನನ್ನು ಕಡೆಗಣಿಸಿಲ್ಲ. ಬೇರೆ ಪಕ್ಷದಿಂದ ಬಂದರೂ ಸಹಿತ ಒಳ್ಳೆಯ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Exit mobile version