ಸೋತರೂ ಕಾಂಗ್ರೆಸ್ನವರು ಗೌರವದಿಂದ ನೋಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಅವರಿಗೆ ಕಾಂಗ್ರೆಸ್ ಇಂದು ವಿಧಾನಪರಿಷತ್ ಸದಸ್ಯ ಸ್ಥಾನವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯಲ್ಲಿ ಗೌರವದಿಂದ ನಡೆಸಿಕೊಂಡಿಲ್ಲ ಎಂದು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಅಂದೇ ಹೇಳಿದ್ದೆ. ಆದರೆ, ಮೂರು ಎಂಎಲ್ಸಿ ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಅವಕಾಶ ನನಗೆ ಕೊಟ್ಟಿದ್ದಾರೆ. ಕಾಂಗ್ರೆಸ್ನ ಹಿರಿಯರು ನನ್ನನ್ನು ಕಡೆಗಣಿಸಿಲ್ಲ. ಬೇರೆ ಪಕ್ಷದಿಂದ ಬಂದರೂ ಸಹಿತ ಒಳ್ಳೆಯ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.