ಸೌಜನ್ಯ ಕೊಲೆ ಪ್ರಕರಣ ತನಿಖೆಗೆ ವಿಶೇಷ ತಂಡ ರಚಿಸಿ

0
119
mutalik

ಹುಬ್ಬಳ್ಳಿ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸೌಜನ್ಯ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರವನ್ನು ಕಾಣದ ಕೈಗಳು ಮಾಡುತ್ತಿದ್ದು, ಸರ್ಕಾರ ಕೊಲೆ ಪ್ರಕರಣ ತನಿಖೆಗೆ ವಿಶೇಷ ತಂಡ ರಚನೆ ಮಾಡಿ, ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ೪೫ ಸಾವಿರ ಮಹಿಳೆಯರು ಕಾಣೆಯಾಗಿದ್ದು, ೪೫ ಸಾವಿರ ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ. ೨೫ ಸಾವಿರ ಅಪ್ರಾಪ್ತೆಯರು ಕಾಣೆಯಾಗಿರುವುದು ವರದಿಯಾಗಿದ್ದು, ಆಘಾತಕಾರಿ ಸಂಗತಿಯಾಗಿದೆ. ಲವ್ ಜಿಹಾದ್ ಪ್ರಕರಣಗಳಿಂದಲೇ ಮಹಿಳೆಯರ ಕಾಣೆ ಪ್ರಕರಣಗಳು ಹೆಚ್ಚಾಗಿವೆ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಈ ಬಗ್ಗೆ ಮಹಿಳಾ ಪಡೆ ರಚಿಸಿ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Previous article1.47 ಕೋಟಿ ರೂ. ಆಸ್ತಿ ಪತ್ತೆ: ದಂಪತಿ ಮನೆ, ಕಚೇರಿ ಮೇಲೆ ಲೋಕಾ ದಾಳಿ
Next articleಕುಮಾರಸ್ವಾಮಿಗೆ ಹೊಟ್ಟೆ ಉರಿ