ರಾಮನಗರ: ಜೆಡಿಎಸ್ ಮುಖಂಡರಾದ ಕನಕಪುರದ ನಾರಾಯಣಗೌಡ ಹಾಗೂ ಬೆಂಗಳೂರು ದಕ್ಷಿಣದ ಪ್ರಭಾಕರ ರೆಡ್ಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ, ಸಂಸದರಾದ ಡಿ. ಕೆ. ಸುರೇಶ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ ಪ್ರಭಾಕರ್ ರೆಡ್ಡಿ ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊನೇ ಕ್ಷಣದಲ್ಲಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೂಡ ಕಾಂಗ್ರೆಸ್ ಸೇರುತ್ತಿದ್ದಾರೆ. ಈಗಾಗಲೇ ಮಾಧ್ಯಮ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪರವಾಗಿ ಅಲೆಯಿದೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ನ ಹೆಬ್ಬಾಗಿಲು ತೆರೆದುಕೊಳ್ಳುತ್ತದೆ. ಯಾರ ಸಹಾಯವನ್ನೂ ಪಡೆದುಕೊಳ್ಳದೆ ಸ್ವತಂತ್ರವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
