Home News ಕರ್ತವ್ಯಕ್ಕೆ ಹಾಜರಾದ ASP ನಾರಾಯಣ ಭರಮನಿ

ಕರ್ತವ್ಯಕ್ಕೆ ಹಾಜರಾದ ASP ನಾರಾಯಣ ಭರಮನಿ

ಧಾರವಾಡ : ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಅವರು ಇಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಅದಕ್ಕೂ ಮುನ್ನು ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ್ದು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ. ಮೇಲಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸಿಎಂ ಹಾಗೂ ಗೃಹ ಸಚಿವರು ಮಾತನಾಡಿದ್ದಾರೆ. ಮುಂದಿನ ನಿರ್ಧಾರ ಸರ್ಕಾರ ಕೈಗೊಳ್ಳುತ್ತದೆ. ಈಗ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿ ಧಾರವಾಡ ಎಎಸ್ ಪಿ ನಾರಾಯಣ ವಿ. ಭರಮನಿ ಅವರಿಗೆ ಹೊಡೆಯಲು ಕೈ ಎತ್ತಿದ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಎಎಸ್ ಪಿ ನಾರಾಯಣ.ವಿ.ಭರಮನಿ ಸ್ವಯಂ ರಾಜೀನಾಮೆ ನೀಡಲು ಮುಂದಾಗಿದ್ದಾರು. ವಿಆರ್‌ಎಸ್ ತೆಗೆದುಕೊಳ್ಳಲು ನಿರ್ಧರಿಸಿದ್ದ ಎನ್.ವಿ ಭರಮನಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ವಾಪಸ್ ಪಡೆದು ಕೆಲಸ ಮುಂದುವರೆಸುವಂತೆ ಹೇಳಿದ್ದಾರೆ ಎನ್ನಲಾಗಿದೆ.

Exit mobile version