ಹಾವೇರಿ: ಹೊರವಲಯದ ಪಟಾಕಿ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಮಾಹಿತಿ ಕಲೆ ಹಾಕಿದ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಹಾವೇರಿಯ ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದಿದ್ದಾರೆ.