ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಕಮಿಷನರ್​ಗೆ ಅಧಿಕಾರ ನೀಡಿದ ಹೈಕೋರ್ಟ್

0
50

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಪರೋಕ್ಷವಾಗಿ ಗ್ರೀನ್ ಸಿಗ್ನಲ್ ನೀಡಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅಡ್ಡಿಯಾಗಿದ್ದ ವಿಘ್ನ ದೂರವಾದಂತಾಗಿದೆ.

ನಿನ್ನೆಯಷ್ಟೆ ಈದ್ಗಾ ಮೈದಾನದಲ್ಲಿ ಮೂರು ದಿ‌ನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅನುಮತಿ‌ ನೀಡಿತ್ತು. ಇದನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡ ಸಾಧಿಕ್ ಗುಡವಾಲಾ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು.ಈದ್ಗಾ ಮೈದಾನದಲ್ಲಿ ಗಣೇಶೋತ್ಸವಈದ್ಗಾ ಮೈದಾನದಲ್ಲಿ ಗಣೇಶೋತ್ಸವಅರ್ಜಿಯ ಪರಿಶೀಲನೆ ನಡೆಸಿದ ಬೆಂಗಳೂರು ಹೈಕೋರ್ಟ್ ಪೀಠ ಈ ಮಹತ್ವದ ತೀರ್ಪು ನೀಡಿದೆ. ಗಣೇಶೋತ್ಸವ ಪ್ರತಿಷ್ಠಾಪನೆಗೆ ಅರ್ಜಿ ನಿರ್ಧರಿಸುವ ಅಧಿಕಾರವನ್ನು ಹುಬ್ಬಳ್ಳಿ – ಧಾರವಾಡ ಮಹಾನಗರ ‌ಪಾಲಿಕೆಯ ಆಯುಕ್ತರಿಗೆ ನೀಡಿದೆ. ಈ ಮೂಲಕ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾನೆಗೆ ಕವಿದಿದ್ದ ಮೋಡ ಸರಿದಂತಾಗಿದೆ.

Previous articleಕಾಲುವೆಗೆ ಕಾರು ಬಿದ್ದು ಮೂವರ ಸಾವು
Next articleಸುಪ್ರೀಂ ಕೋರ್ಟ್​​ ಆದೇಶ ; ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಿ