ಧಾರವಾಡ ಹೊಸ ಬಸ್ ನಿಲ್ದಾಣದ ಬಸ್ನಲ್ಲಿ ಮಹಿಳೆಯೊಬ್ಬರಿಗೆ ಉಚಿತ ಪ್ರಯಾಣದ ಟಿಕೆಟ್ ನೀಡುವ ಮೂಲಕ ರಾಜ್ಯ ಸರಕಾರದ “ಶಕ್ತಿ’ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಂತೋಷ ಲಾಡ್ ಚಾಲನೆ ನೀಡಿದರು.

ಹುಬ್ಬಳ್ಳಿ ಸಿಬಿಟಿಯಲ್ಲಿ ಶಕ್ತಿ ಯೋಜನೆ ಚಾಲನೆ ವೇಳೆ ಪಿಂಕ್ ಬಲೂನ್ ಗಳಿಂದ ಸಿಂಗಾರಗೊಂಡ ಸಿಟಿ ಬಸ್ ಗಮನ ಸೆಳೆಯಿತು. ಶಾಸಕ ಪ್ರಸಾದ ಅಬ್ಬಯ್ಯ ಅವರೇ ಇಟಿಎಂ ಹಿಡಿದು ಮಹಿಳೆಯರಿಗೆ ಶೂನ್ಯ ಟಿಕೆಟ್ ವಿತರಿಸುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು.