ಹೆಲಿಪ್ಯಾಡ್ ಬಳಿ ಬೆಂಕಿ: ಸಿಎಂ ಅಪಾಯದಿಂದ ಪಾರು

0
18

ಉಡುಪಿ: ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆದ ಸ್ಥಳದಲ್ಲಿ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಪ್ರಯಾಣ ಬೆಳೆಸಿದರು.

Previous articleಭಿನ್ನಮತ ಶೀಘ್ರ ಶಮನ
Next articleಬೊಮ್ಮಾಯಿ ಧಮ್‌, ತಾಕತ್‌ ಎಷ್ಟಿದೆ ತೋರಿಸಲಿ