ಹೊಟ್ಟೆ ತುಂಬಿದ ಬಿಜೆಪಿ ಸರ್ಕಾರಕ್ಕೆ ಬಡವರ ಹಸಿವು ಅರ್ಥವಾಗುತ್ತಿಲ್ಲ

0
26

ಬೆಂಗಳೂರು: ಹೊಟ್ಟೆ ತುಂಬಿದ ಬಿಜೆಪಿ ಸರ್ಕಾರಕ್ಕೆ ಬಡವರ ಹಸಿವು ಅರ್ಥವಾಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಎಂದಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದ ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದು ಆಹಾರವನ್ನು ಪ್ರತಿಯೊಬ್ಬರ ಹಕ್ಕನ್ನಾಗಿ ಮಾಡಲಾಯಿತು. ಕಾಂಗ್ರೆಸ್‌ ಪಕ್ಷ ನೀಡಿದ್ದ ಪ್ರತಿಯೊಂದು ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಆದರೆ, ಅಧಿಕಾರ ಸಿಗದೆ ಹತಾಶೆಯಲ್ಲಿರುವ ಬಿಜೆಪಿ ಸರ್ಕಾರ ನ್ಯಾಯಯುತವಾಗಿ ನಮಗೆ ಸಲ್ಲಬೇಕಾದ ಅಕ್ಕಿ ನೀಡದೆ ರಾಜ್ಯ ಸರ್ಕಾರದ ಹಕ್ಕನ್ನು ಕಸಿಯುತ್ತಿದೆ. ಹೊಟ್ಟೆ ತುಂಬಿದ ಬಿಜೆಪಿ ಸರ್ಕಾರಕ್ಕೆ ಬಡವರ ಹಸಿವು ಅರ್ಥವಾಗುತ್ತಿಲ್ಲ. ಕನ್ನಡಿಗರ ಆಕ್ರೋಶವನ್ನು ದಿಲ್ಲಿಗೆ ತಲುಪಿಸಬೇಕಿದೆ, ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ.ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ, ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ.ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ ಎಂದರು.

Previous articleನಾವೆಲ್ಲ ಸೇರಿ ಬ್ರ್ಯಾಂಡ್ ಕರ್ನಾಟಕ ಕಟ್ಟೋಣ!
Next articleಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ