10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನ

0
21
PM-Modi

ಅಕ್ಟೋಬರ್ 22ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ 10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮತ್ತು ಹೊಸದಾಗಿ ನೇಮಕವಾದ 75,000 ಜನರಿಗೆ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಪ್ರಧಾನಿ ಕಚೇರಿ(PMO) ಮಾಹಿತಿ ನೀಡಿದೆ.
ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮತ್ತು ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಪ್ರಧಾನ ಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದೆ. ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳು ಮಂಜೂರಾದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನ ಮಾದರಿಯಲ್ಲಿ ಕೆಲಸ ಮಾಡುತ್ತಿವೆ ಎಂದು ತಿಳಿಸಿದೆ.

Previous articleಇಬ್ಬರು ಪಿಡಿಒಗಳು ಲೋಕಾಯುಕ್ತ ಬಲೆಗೆ
Next articleʻನಾನು ಎಲ್ಲೂ ಹೋಗಲ್ಲ….!ʼ: ದೇವೇಗೌಡರೆದುರು ಕಣ್ಣೀರು ಹಾಕಿದ ಜಿಟಿಡಿ