2023ರ ಚುನಾವಣೆಯಲ್ಲಿ ಬಿಜೆಪಿ ವಿಜಯಶಾಲಿ: ಬೊಮ್ಮಾಯಿ ವಿಶ್ವಾಸ

0
14
cm

ಬೆಂಗಳೂರು: ಭಾರತೀಯ ಜನತಾ ಪಕ್ಷ ಮತ್ತೊಮ್ಮೆ 2023ರ ಚುನಾವಣೆಯಲ್ಲಿ ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತೀಯ ಜನತಾ ಪಕ್ಷ ನಿರಂತರವಾಗಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ಇಂದು ಪ್ರಾರಂಭವಾಗುತ್ತಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಕಾರ್ಯಕ್ರಮಗಳು, ನೀತಿಗಳು ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳಿಂದಾಗಿ ಒಂದೊಂದು ಕ್ಷೇತ್ರದ ಸಾವಿರಾರು ಜನರಿಗೆ ಅನುಕೂಲವಾಗಿದೆ. ಅದನ್ನು ಜನಕ್ಕೆ ತಿಳಿಹೇಳಿ ಮುಂಬರುವ ಕಾರ್ಯಕ್ರಮಗಳನ್ನು ಯಾವ ವರ್ಗಗಳಿಗೆ ರೂಪಿಸಿದೆ, ಯಾವ ರೀತಿ ಲಾಭ ಪಡೆಯಬೇಕೆಂಬ ತೀರ್ಮಾನಗಳನ್ನು ಜನರಿಗೆ ತಿಳಿಸಲಾಗುವುದು.

Previous articleಇಂದು ಅಗತ್ಯವಿರುವ ನಿಜವಾದ ಭೂಮಿಪೂಜೆ
Next articleಎಸ್‌ಸಿ/ಎಸ್‌ಟಿಗೆ ಸೇರ್ಪಡೆಗೊಳಿಸಲು ಇತರೆ ಸಮುದಾಯಗಳ ಒತ್ತಾಯ, ಪರಿಶೀಲನೆ: ಸಿಎಂ