Home ತಾಜಾ ಸುದ್ದಿ ಶಾಂತಿಯುತ ಗಣೇಶೋತ್ಸವ: ಪೊಲೀಸ್‌ ಅಧಿಕಾರಿಗಳಿಗೆ ಸನ್ಮಾನ

ಶಾಂತಿಯುತ ಗಣೇಶೋತ್ಸವ: ಪೊಲೀಸ್‌ ಅಧಿಕಾರಿಗಳಿಗೆ ಸನ್ಮಾನ

0
ಶಾಂತಿಯುತ ಗಣೇಶೋತ್ಸವ: ಪೊಲೀಸ್‌ ಅಧಿಕಾರಿಗಳಿಗೆ ಸನ್ಮಾನ

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಗಣೇಶೋತ್ಸವ ಹಬ್ಬವನ್ನ ವೈಭವದಿಂದ ಆಚರಿಸಲು ಸಹಕರಿಸಿದ ಹಾಗೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಮಸ್ತ ಪೊಲೀಸ್ ಸಿಬ್ಬಂದಿಗೆ ಮಹಾನಗರ ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಡಾ. ಗೋಪಾಲ್ ಬ್ಯಾಕೋಡ ಅವರನ್ನು ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳದ ಅಧ್ಯಕ್ಷ ಮೋಹನ್ ಲಿಂಬಿಕಾಯಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಮಹಾಮಂಡಳದ ಪದಾಧಿಕಾರಿಗಳು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಯೂಸೂಫ್ ಸವಣೂರ, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರ ಹಾಗೂ ವಿವಿಧ ಗಜಾನನ ಸಮಿತಿಗಳ ಮುಖಂಡರು ಇದ್ದರು.