5ರಂದು ಬಳ್ಳಾರಿಗೆ ಪ್ರಧಾನಿ ನರೇಂದ್ರ ಮೋದಿ

0
14
ಮೋದಿ


ಬಳ್ಳಾರಿ: ಬಳ್ಳಾರಿ ಜಿಲ್ಲೆಯ ವಿಧಾನ ಸಭಾ ಚುನಾವಣೆ ಪ್ರಚಾರಕ್ಕೆ ಮೇ 5ರಂದು ಬಳ್ಳಾರಿ ನಗರಕ್ಕೆ ಆಗಮಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮುರಹರ ಗೌಡ ಹೇಳಿದರು.
ನಗರದ ಹೊರ ವಲಯದ ಅಮರೇಶ್ವರ ದೇವಸ್ಥಾನದ ಬಳಿ ನಿರ್ಮಾಣ ಮಾಡಲಾಗುತ್ತಿರುವ ವೇದಿಕೆ ಬಳಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಂಡೂರು, ಸಿರುಗುಪ್ಪ, ಕಂಪ್ಲಿ, ಬಳ್ಳಾರಿ ನಗರ, ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುವರು ಎಂದರು.
80 ಸಾವಿರ ಜನಕ್ಕೆ ಅಸನ ವ್ಯವಸ್ಥೆ ಮಾಡಲಾಗಿದೆ.
ಬೇರೆ ಬೇರೆ ಊರುಗಳಿಂದ ಬರುವ ಜನರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದರು
ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾ ಅಧ್ಯಕ್ಷ ಡಾ.ಕೆ. ಲಕ್ಷ್ಮಣ, ಮಾಜಿ ಸಂಸದ ಜಿತೇಂದ್ರ ರೆಡ್ಡಿ, ಕೆ. ರಾಮಲಿಂಗಪ್ಪ, ಕೆ.ಎಸ್. ಅಶೋಕ್ ಕುಮಾರ್, ವೀರಶೇಖರ್ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಇದ್ದರು.

Previous articleಪ್ರತಾಪ್ ರೆಡ್ಡಿ ಕಾಂಗ್ರೆಸ್ ಸೇರ್ಪಡೆ
Next articleಕೊಲ್ನಾಡಿನಲ್ಲಿ ಮೋದಿ ಹವಾ