Home ತಾಜಾ ಸುದ್ದಿ 6 ಕ್ಷೇತ್ರಗಳಲ್ಲಿ ಎಂಇಎಸ್ ಸ್ಪರ್ಧೆ

6 ಕ್ಷೇತ್ರಗಳಲ್ಲಿ ಎಂಇಎಸ್ ಸ್ಪರ್ಧೆ

0
MES

ಬೆಳಗಾವಿ: ನಾಡದ್ರೋಹಿ ಎಂಇಎಸ್ ಸಂಘಟನೆ ಬೆಳಗಾವಿ ಜಿಲ್ಲೆಯ 6 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ನಗರದಲ್ಲಿ ಕಳೆದ ದಿನ ದೀಪಕ ದಳವಿ ಮತ್ತು ಮಾಜಿ ಶಾಸಕ ಮನೋಹರ ಕಿಣೇಕರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.
ಬೆಳಗಾವಿ ಗ್ರಾಮೀಣ, ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ, ಖಾನಾಪುರ, ನಿಪ್ಪಾಣಿ, ಮತ್ತು ಯಮಕನಮರಡಿ ವಿಧಾನಸಭೆ ಕ್ಷೇತ್ರಗಳಲ್ಲಿ ಎಂಇಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದೆ.
ಇದರ ಜೊತೆಗೆ ಸಂಘಟನೆಯಲ್ಲಿ ಬಿರುಕು ಮೂಡಿಸುವವರ ವಿರುದ್ಧವೂ ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.
ಮಹಾರಾಷ್ಟ್ರ ಏಕೀಕರಣ ಸಮಿತಿಯ ಏಕತೆಗೆ ಭಂಗ ತರಲು ಯತ್ನಿಸುತ್ತಿರುವವರ ವಿರುದ್ಧ ಖಾನಾಪುರ ಮಹಾರಾಷ್ಟ್ರ ಏಕೀಕರಣ ಸಮಿತಿ ಖಂಡಿಸಿದೆ. ಸಮಿತಿಯಲ್ಲಿ ಒಡಕು ಮೂಡಿಸುವರನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನೂ ಇದೆ ಸಂದರ್ಭದಲ್ಲಿ ನೀಡಲಾಯಿತು.

Exit mobile version