Home News 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

ಬಳ್ಳಾರಿ: ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ, ಡಿಸೆಂಬರ್‌ನಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದರೊಂದಿಗೆ ದೀಪ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದರು.
ಸುದ್ದಿಗೋಷ್ಠಿಗೂ ಮುನ್ನ ಖಾಸಗಿ ಹೋಟೆಲ್‌ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಅವರು ತಿಳಿಸಿದರು.

Exit mobile version