ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಕಲಿಸಲು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಕರ್ನಾಟಕದಲ್ಲಿ 450 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಧಿಸೂಚನೆ ಪ್ರಕಟಿಸಲಾಗಿದೆ.
ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೇವಲ ಹಿಂದಿ ಮಾತನಾಡುತ್ತಾರೆ. ಸ್ಥಳೀಯ ಭಾಷೆ ಮಾತನಾಡುವುದಿಲ್ಲ ಎಂಬುದು ಆರೋಪವಾಗಿದೆ. ಇದರಿಂದಾಗಿ ಗ್ರಾಮೀಣ ಭಾಗದಿಂದ ಬ್ಯಾಂಕ್ ಕೆಲಸಗಳಿಗೆ ಬರುವ ಜನರಿಗೆ ತೊಂದರೆಯಾಗುತ್ತಿದೆ.
ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಸಿಬ್ಬಂದಿಗೆ ಸ್ಥಳೀಯ ಭಾಷೆ ಕಲಿಸಲು Local Bank Officer ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸ್ಥಳೀಯ ಭಾಷೆಯನ್ನು ಸ್ಪುಟವಾಗಿ ಬರೆಯಲು ಮತ್ತು ಓದಲು ಬರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆಗಳಲ್ಲಿ ಸೇವೆ ನೀಡಬೇಕು ಎಂದು ಬೇಡಿಕೆ ಹೆಚ್ಚಾಗುತ್ತಿರುವ ಹೊತ್ತಿನಲ್ಲಿಯೇ ಈ ನೇಮಕಾತಿ ನಡೆಯುತ್ತಿದೆ. ಆ ರಾಜ್ಯಕ್ಕೆ ಸೇರಿದ ಸ್ಥಳೀಯ ಭಾಷೆ ಮಾತನಾಡಲು, ಬರೆಯಲು, ಅರ್ಥ ಮಾಡಿಕೊಳ್ಳಲ ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ 21, ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಸಂಸ್ಥೆ ಅಥವ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಯಾವುದೇ ಸ್ಥಳೀಯ ಬ್ಯಾಂಕು ಅಥವ ಆರ್‌ಬಿಐ ಮಾನ್ಯತೆ ಪಡೆದ ಬ್ಯಾಂಕುಗಳಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಇರಬೇಕು.
ಗೋವಾ 15, ಗುಜರಾತ್ 1160, ಜಮ್ಮು ಮತ್ತು ಕಾಶ್ಮೀರ 10, ಕರ್ನಾಟಕ 450, ಕೇರಳ 50, ಮಹಾರಾಷ್ಟ್ರ 485, ಒಡಿಶಾ 60, ಪಂಜಾಬ್ 50 ಸೇರಿದಂತೆ ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿ ಒಂದು ರಾಜ್ಯದ ಹುದ್ದೆಗೆ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.
ಈ ಹುದ್ದೆಗಳಿಗೆ 48,480-85,920 ರೂ.ಗಳ ವೇತನ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷಗಳ ಕಾಲ ಪ್ರೊಬೆಷನರಿಯಾಗಿ ಕೆಲಸ ಮಾಡಬೇಕು. ಅಭ್ಯರ್ಥಿಗಳು ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ಕೆಲಸ ಮಾಡಬೇಕು ಎಂದು ಎಂದು ಸೂಚಿಸಲಾಗಿದೆ.
ಆನ್‌ಲೈನ್ ಪರೀಕ್ಷ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ Bank of Baroda ವೆಬ್‌ಸೈಟ್‌ಗೆ ಭೇಟಿ ನೀಡಿ.