PAY CM ಪೋಸ್ಟರ್‌: ಐವರು ಪೊಲೀಸ್‌ ವಶಕ್ಕೆ, ಸರ್ಕಾರಕ್ಕೆ ಸವಾಲು ಹಾಕಿದ ಸಿದ್ದು-ಡಿಕೆಶಿ

0
137
PAY CM

PAY CM ಪೋಸ್ಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ಐವರು ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನು ತಮ್ಮ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದು, ನಾಳೆ ನಾನೇ ಪೇ ಸಿಎಂ ಪೋಸ್ಟರ್‌ ಅಂಟಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಇನ್ನು ಈ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ನಾಳೆ ಎಲ್ಲಾ ಎಂಎಲ್‌ಸಿ, ಎಂಎಲ್‌ಎಗಳು ಸೇರಿ ಪೇ ಸಿಎಂ ಪೋಸ್ಟರ್‌ಗಳನ್ನು ಸರ್ಕಾರಿ ಕಟ್ಟಡಗಳ ಮೇಲೆ ಅಂಟಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

Previous articleದೇಶಾದ್ಯಂತ 93 ಕಡೆ NIA ದಾಳಿ
Next articleಚಾಕು ಇರಿತ: ಯುವಕ ಸಾವು