Home News Vande Bharat: ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು, ಮಾರ್ಗ, ವೇಳಾಪಟ್ಟಿ

Vande Bharat: ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು, ಮಾರ್ಗ, ವೇಳಾಪಟ್ಟಿ

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ಜನರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಶಿವಮೊಗ್ಗಕ್ಕೆ ಎರಡು ವಂದೇ ಭಾರತ್ ರೈಲುಗಳನ್ನು ನೀಡಲಾಗಿದೆ. ಸಂಸದ ಬಿ. ವೈ. ರಾಘವೇಂದ್ರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಶಿವಮೊಗ್ಗದಿಂದ ಎರಡು ವಂದೇ ಭಾರತ್ ರೈಲುಗಳು ಸಂಚಾರವನ್ನು ನಡೆಸುತ್ತದೆ. ಈಗಾಗಲೇ ಎರಡು ರೈಲುಗಳ ವೇಳಾಪಟ್ಟಿ ಮತ್ತು ಗಾಡಿಗಳ ಸಂಖ್ಯೆಯನ್ನು ಅಂತಿಮಗೊಳಿಸಲಾಗಿದೆ ಎಂದು ಬಿ. ವೈ. ರಾಘವೇಂದ್ರ ಹೇಳಿದ್ದಾರೆ.

ವಂದೇ ಭಾರತ್ ರೈಲುಗಳು ಶಿವಮೊಗ್ಗ-ತಿರುಪತಿ, ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಸಂಚಾರವನ್ನು ನಡೆಸಲಿವೆ. ಆದರೆ ಯಾವಾಗ ರೈಲುಗಳ ಸಂಚಾರ ಆರಂಭವಾಗಲಿದೆ? ಎಂದು ದಿನಾಂಕವನ್ನು ನಿಗದಿಗೊಳಿಸಿಲ್ಲ.

ಪ್ರಧಾನಿ ನರೇಂದ್ರ ಮೋದಿ 2023ರ ಫೆಬ್ರವರಿ 27ರಂದು ಶಿವಮೊಗ್ಗ ನಗರದ ಹೊರವಲಯದ ಕೋಟೆಗಂಗೂರು ಎಂಬಲ್ಲಿ ರೈಲ್ವೆ ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ನಿರ್ಮಾಣ ಯೋಜನೆಗೆ ಶಂಕು ಸ್ಥಾಪನೆ ಮಾಡಿದ್ದರು. ಈ ಯೋಜನೆ ಕುರಿತು ಮಾಹಿತಿ ನೀಡುವಾಗ ಸಂಸದರು ವಂದೇ ಭಾರತ್ ರೈಲಿನ ಕುರಿತು ಮಾಹಿತಿ ಕೊಟ್ಟಿದ್ದಾರೆ.

ರೈಲಿನ ವೇಳಾಪಟ್ಟಿ: ಶಿವಮೊಗ್ಗ-ತಿರುಪತಿ ವಂದೇ ಭಾರತ್ ರೈಲು ಶಿವಮೊಗ್ಗದಿಂದ ಮುಂಜಾನೆ 4.30ಕ್ಕೆ ಶಿವಮೊಗ್ಗದಿಂದ ಹೊರಟು, ಮಧ್ಯಾಹ್ನ 12.30ಕ್ಕೆ ತಿರುಪತಿ ತಲುಪಲಿದೆ. ಸಂಜೆ 4.30ಕ್ಕೆ ತಿರುಪತಿಯಿಂದ ಹೊರಟು, ರಾತ್ರಿ 12.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ.

ಮತ್ತೊಂದು ರೈಲು ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರವನ್ನು ನಡೆಸುತ್ತದೆ. ಯಶವಂತಪುರ-ಶಿವಮೊಗ್ಗ ನಡುವಿನ ವಂದೇ ಭಾರತ್ ರೈಲಿಗಾಗಿ ಸಂಸದ ಬಿ. ವೈ. ರಾಘವೇಂದ್ರ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಆದರೆ ಈ ರೈಲಿನ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.

ಶಿವಮೊಗ್ಗದಿಂದ ಶಿವಮೊಗ್ಗ-ತಿರುಪತಿ, ಶಿವಮೊಗ್ಗ-ಬೆಂಗಳೂರು, ಶಿವಮೊಗ್ಗ-ಎರ್ನಾಕುಲಂ, ಶಿವಮೊಗ್ಗ-ಬಗಲ್‌ಪುರ, ಶಿವಮೊಗ್ಗ೦-ಜೆಮ್‌ಶೆಡ್‌ಪುರ, ಶಿವಮೊಗ್ಗ-ಚಂಡೀಗಢ, ಶಿವಮೊಗ್ಗ-ಗೌಹಾಟಿ ನಡುವೆ ಹೊಸ ರೈಲುಗಳು ಸಂಚಾರವನ್ನು ನಡೆಸಲಿವೆ.

ಸಂಸದರು ಕೋಟೆಗಂಗೂರು ಎಂಬಲ್ಲಿ ರೈಲ್ವೆ ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಕುರಿತು ಸಹ ಮಾಹಿತಿ ನೀಡಿದ್ದಾರೆ. ಕರ್ನಾಟಕದ 4ನೇ ಕೋಚಿಂಗ್ ಡಿಪೋ ಆರಂಭದಿಂದ ಶಿವಮೊಗ್ಗದಲ್ಲಿ ರೈಲ್ವೆ ಕ್ರಾಂತಿಯಾಗಲಿದೆ. ಬೆಂಗಳೂರು, ಮೈಸೂರು ಮೇಲಿನ ಒತ್ತಡ ಕಡಿಮೆ ಮಾಡಲು ಈ ಡಿಪೋ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ರೈಲ್ವೆ ಕೋಚಿಂಗ್ ಡಿಪೋ 2026ರ ಜನವರಿ ಅಂತ್ಯದೊಳಗೆ ಪ್ರಾರಂಭವಾಗಲಿದೆ. ಹಲವು ರೈಲುಗಳ ಬೆಂಗಳೂರು, ಮೈಸೂರು ಹೊರತುಪಡಿಸಿ ಶಿವಮೊಗ್ಗದಿಂದ ಸಂಚಾರವನ್ನು ಆರಂಭಿಸಲಿವೆ ಎಂದು ಸಂಸದರು ತಿಳಿಸಿದರು. ಈ ಕೋಚಿಂಗ್ ಡಿಪೋದಲ್ಲಿ ವಂದೇ ಭಾರತ್ ರೈಲುಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ಶಿವಮೊಗ್ಗ ಮಲೆನಾಡಿನ ಹೆಬ್ಬಾಗಿಲು. ಶಿವಮೊಗ್ಗ ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವೂ ಹೌದು. ದೇಶ-ವಿದೇಶದಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಬಸ್, ವಿಮಾನ ಸಂಪರ್ಕ ಶಿವಮೊಗ್ಗಕ್ಕೆ ಇದೆ. ಬೆಂಗಳೂರು-ಶಿವಮೊಗ್ಗ ನಡುವೆ ಸಂಚಾರ ನಡೆಸಲು ಅನುಕೂಲವಾಗುವಂತೆ ಪ್ರಯಾಣದ ಅವಧಿ ಕಡಿಮೆ ಮಾಡಲು ವಂದೇ ಭಾರತ್‌ ರೈಲುಗಳ ಸಂಚಾರವನ್ನು ಆರಂಭಿಸಬೇಕು ಎಂದು ಬೇಡಿಕೆ ಇಡಲಾಗಿತ್ತು.

Exit mobile version