ಚಿಕ್ಕಮಗಳೂರು: ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಜನತೆಗೆ ತಿರುಪತಿಗೆ ನೂತನ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಈ ಭಾಗದ ಜನತೆ ಈ ರೈಲಿನ ಸೌಲಭ್ಯ ಪಡೆದುಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ ಎಂದಿದ್ದಾರೆ.
ಚಿಕ್ಕಮಗಳೂರು – ತಿರುಪತಿಯ ನೂತನ ರೈಲು ಸಂಚರಿಸುವ ವಾರ ಸಮಯ
ತಿರುಪತಿ-ಚಿಕ್ಕಮಗಳೂರು (ರೈಲು ಸಂಖ್ಯೆ 17423) : ಈ ರೈಲು ಪ್ರತಿ ಗುರುವಾರ ರಾತ್ರಿ 09.00 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು ಮರುದಿನ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಚಿಕ್ಕಮಗಳೂರು ತಲುಪಲಿದೆ.
ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424) : ಈ ರೈಲು ಪ್ರತಿ ಶುಕ್ರವಾರ ಸಂಜೆ 05:30 ಚಿಕ್ಕಮಗಳೂರಿನಿಂದ ಹೊರಡಲಿದ್ದು ಶನಿವಾರ ಬೆಳಿಗ್ಗೆ 07:40ಕ್ಕೆ ತಿರುಪತಿ ತಲುಪಲಿದೆ.
ನಿಲ್ದಾಣಗಳು : ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್‌ಫೀಲ್ಡ್ ಕೆ ಆರ್ ಪುರಂ, ಎಸ್ಎಂವಿಬಿ ಬೆಂಗಳೂರು, ಚಿಕ್ಕ ಬಾಣಾವರ, ತುಮಕೂರು, ತಿಪಟೂರು, ಅರಸೀಕೆರೆ, ದೇವನೂರು, ಬಿರೂರು, ಕಡೂರು, ಬಿಸಲೇಹಳ್ಳಿ, ಸಕರಾಯಪಟ್ಟಣ