NEET-PG ಪರೀಕ್ಷೆ ದಿನಾಂಕ ಪ್ರಕಟ

Advertisement

ಬೆಂಗಳೂರು: ನೀಟ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಆಗಸ್ಟ್ 11ರಂದು ಎರಡು ಪಾಳಿಯಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿ – NBEMS ತಿಳಿಸಿದೆ.
ಮೇ 5ರಂದು ನಡೆದಿದ್ದ ನೀಟ್‌-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಬೆಳಕಿಗೆ ಬಂದಿತ್ತು. ಈ ವಿವಾದದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23ರಂದು ನಡೆಯಬೇಕಿದ್ದ ನೀಟ್‌-ಪಿಜಿ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿತ್ತು.