Home Advertisement
Home ನಮ್ಮ ಜಿಲ್ಲೆ ಧಾರವಾಡ ʻಚುನಾವಣೆಯಲ್ಲಿ ಸ್ಪರ್ಧೆ ಖಚಿತ, ಬಿಜೆಪಿಯಿಂದಲ್ಲʼ

ʻಚುನಾವಣೆಯಲ್ಲಿ ಸ್ಪರ್ಧೆ ಖಚಿತ, ಬಿಜೆಪಿಯಿಂದಲ್ಲʼ

0
138
mutalik

ಧಾರವಾಡ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದ್ದಾರೆ.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿರುವುದರಿಂದ ಚುನಾಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಬೆಳಗಾವಿ ಜಿಲ್ಲೆ, ತೇರದಾಳ, ಜಮಖಂಡಿ, ಕಾರ್ಕಳ, ಉಡುಪಿ, ಶೃಂಗೇರಿ, ಪುತ್ತೂರಿನಿಂದ ಸ್ಪರ್ಧಿಸುವಂತೆ ಹಿಂದೂ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಇನ್ನೂ ಕ್ಷೇತ್ರ ನಿರ್ಧರಿಸಿಲ್ಲ ಎಂದು ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೇಟ್ ಕೇಳಿದ್ದೆ. ಆದರೆ ಸಕಾರಾತ್ಮಕ ಸ್ಪಂದನೆ ಸಿಗದಿದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೆ. ಬಿಜೆಪಿಯವರು ಟಿಕೇಟ್ ನೀಡಲು ಮುಂದೆ ಬಂದರೂ ನಾನು ಸ್ವತಂತ್ರ ಅಭ್ಯರ್ಥಿಯಾಗಿಯೇ ಕಣಕ್ಕಿಳಿಯುತ್ತೇನೆ ಎಂದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಹಿಂದುತ್ವವನ್ನು ಪ್ರತಿಪಾದಿಸುವ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.