ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ರವಿಚಂದ್ರನ್ ಅಶ್ವಿನ್

0
19

ನವದೆಹಲಿ: ಗಾಬಾದಲ್ಲಿ ನಡೆದ ಭಾರತ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗಿದೆ. ಈ ಸುದ್ದಿಯ ಬೆನ್ನಲ್ಲೇ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದಾರೆ.
38 ವರ್ಷದ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಆಟಗಾರನಾಗಿದ್ದಾರೆ. ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ಟೆಸ್ಟ್ ಪಾದಾರ್ಪಣೆ ಮಾಡಿದ್ದರು. 2010 ಜೂ.5 ರಂದು ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯಕ್ಕೆ ಎಂಟ್ರಿ ಆಗಿದ್ದರು. ವಿರಾಟ್ ಕೊಹ್ಲಿ ಜತೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಕೂತಿದ್ದ ಅಶ್ವಿನ್ ಅವರು ಒಂದು ಅಪ್ಪುಗೆ ಕೊಟ್ಟಿದ್ದರು. ಈ ವೇಳೆಯೇ ಅವರು ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು.

ಮೂರನೇ ಟೆಸ್ಟ್ ಪಂದ್ಯ ಡ್ರಾ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್‌ ಪಂದ್ಯದ 5ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ಗೆ 89 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಭಾರತಕ್ಕೆ ಈ ಪಂದ್ಯವನ್ನು ಗೆಲ್ಲಲು 275 ರನ್‌ಗಳ ಗುರಿಯನ್ನು ನೀಡಿತ್ತು, ಆಸೀಸ್ ಡಿಕ್ಟೇ‌ರ್ ವೇಳೆಗೆ ದಿನದಾಟದಲ್ಲಿ 54 ಓವರ್‌ಗಳು ಬಾಕಿ ಉಳಿದಿತ್ತು. ಬಳಿಕ ಗುರಿ ಬೆನ್ನಟ್ಟಿದ ಭಾರತ ಎರಡು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಎಂಟು ರನ್ ಗಳಿಸಿತ್ತು. ಇದರ ಬೆನ್ನಲ್ಲೇ ಸುರಿದ ಮಳೆಯಿಂದಾಗಿ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು.

Previous articleಬಿಜೆಪಿಯ 3 ಮುಖ್ಯಮಂತ್ರಿಗಳು ಏಕೆ ಕ್ರಮ ಕೈಗೊಳ್ಳಲಿಲ್ಲ?
Next articleವೈರಲ್‌ ಆದ ಪೊಲೀಸ್‌ ಇಲಾಖೆಯ ಜಾಗೃತಿ ಸಂದೇಶ