Home ನಮ್ಮ ಜಿಲ್ಲೆ ಅಂದಿನ ಕಾಂಗ್ರೆಸ್ಸೇ ಬೇರೆ‌. ಈಗಿನದ್ದೇ ಬೇರೆ

ಅಂದಿನ ಕಾಂಗ್ರೆಸ್ಸೇ ಬೇರೆ‌. ಈಗಿನದ್ದೇ ಬೇರೆ

0

‘ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ಸೇ ಬೇರೆ‌. ಈಗಿನದ್ದೇ ಬೇರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ‘ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿ ಕೊಡುಗೆ ಏನು?’ ಎಂದು ಕೇಳಿರುವ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದರು. ಅಂದಿನ ಕಾಂಗ್ರೆಸ್‌ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋದರು. ಆದರೆ, ಇಂದಿನ ಕಾಂಗ್ರೆಸ್‌ನ ಯಾವೊಬ್ಬ ನಾಯಕನೂ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗಿಲ್ಲ. ಜೈಲಿಗೆ ಹೋಗಿಲ್ಲ. ಈಗಿರುವ ಕಾಂಗ್ರೆಸ್ ನಾಯಕರು ಬೇರೆ ಬೇರೆ ಕಾರಣಗಳಿಗಾಗಿ ಜೈಲಿಗೆ ಹೋಗಿದ್ದಾರೆ’ ಎಂದು ವ್ಯಂಗ್ಯವಾಡಿದರು.

Exit mobile version