ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ನನಗೆ ವರ್ಗಾವಣೆ ಮಾಡುವ ಅಧಿಕಾರವೇ ಇರಲಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಕಚೇರಿಯಲ್ಲಿ ವರ್ಗಾವಣೆ ದಂಧೆ ಎಂದು ಆರೋಪ ಮಾಡಿದ್ದ ಕುಮಾರಸ್ವಾಮಿ ಅವರಿಗೆ ತಮ್ಮ ಅವಧಿಯಲ್ಲಿ ಆಗಿದ್ದನ್ನೇ ಈಗ ಹೇಳ್ತಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನನಗೆ ವರ್ಗಾವಣೆ ಮಾಡೋ ಅಧಿಕಾರವೇ ಇರಲಿಲ್ಲ. ಕಾಂಗ್ರೆಸ್‌ನವರು ಹೇಳಿದಂತೆ ನಾನು ವರ್ಗಾವಣೆ ಮಾಡಬೇಕಿತ್ತು. ನನ್ನನ್ನ ಯಾವ ರೀತಿ ನಡೆಸಿಕೊಂಡಿದ್ದೀರಿ ಎನ್ನುವುದನ್ನ ನೀವೇ ಒಮ್ಮೆ ನೆನಪು ಮಾಡಿಕೊಳ್ಳಿ. ಯಾರಿಂದಲೂ 5 ರೂ. ತೆಗೆದುಕೊಳ್ಳದೇ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದರು.