ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ನಿಂದ ಅಪಮಾನ: ಕಾಂಗ್ರೆಸ್ ವಿರುದ್ದ  ಬಿಜೆಪಿ ಸಂಸದರ ಪ್ರತಿಭಟನೆ

0
16

ನವದೆಹಲಿ: ಕಾಂಗ್ರೆಸ್ ಪಕ್ಷ ಸಂವಿಧಾನ ಕೊಲೆ ಮಾಡಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದು ದೇಶದ ಜನರ ಕ್ಷಮೆ ಕೇಳುವಂತೆ ಆಗ್ರಹಿಸಿ ಸಂಸತ್ ಭವನದ ಎದುರು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ಕಾಂಗ್ರೆಸ್ ವಿರುದ್ದ ಪೋಸ್ಟರ್ ಗಳನ್ನು ಹಿಡಿದು ಕಾಂಗ್ರೆಸ್ ಸಂವಿಧಾನ ಹತ್ಯೆ ಮಾಡಿದ್ದು, ದೇಶದ ಜನರ ಕ್ಷಮೆ ಕೇಳಬೇಕು ಎಂದು ಘೋಷಣೆ ಕೂಗಿದರು.
ಸಂವಿಧಾನ ಶಿಲ್ಪಿ ಡಾ‌. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ದೇಶ ಸಹಿಸುವುದಿಲ್ಲ. ಗಾಂಧಿ ಪರಿವಾರ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಸದರಾದ ಗೋವಿಂದ ಕಾರಜೋಳ, ಅನುರಾಗ್ ಸಿಂಗ್ ಠಾಕೂರ್, ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಅನೇಕ ಸಂಸದರು ಪಾಲ್ಗೊಂಡಿದ್ದರು.

Previous articleಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಕ್ರಿಯಾ ಯೋಜನೆ
Next articleಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭರ್ಜರಿ ಭೋಜನ