Home ಅಪರಾಧ ಅಕ್ಕ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಅಕ್ಕ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

0

ಕಲಘಟಗಿ: ಸೀರೆಯೊಂದಕ್ಕೆ ಅಕ್ಕ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಬೆಂಡಿಗೇರಿ ಓಣಿಯಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸಹೋದರಿಯರು ಮನೆಯಲ್ಲಿ ತಾಯಿ ಇಲ್ಲದ ಸಮಯ ನೋಡಿಕೊಂಡು ಒಂದೇ ಸೀರೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾವ್ಯ ಹಡಪದ(19), ಭೂಮಿಕಾ ಹಡಪದ(17) ಎಂಬುವರೇ ಆತ್ಮಹತ್ಯೆಗೆ ಶರಣಾದ ಸಹೋದರಿಯರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಲಘಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Exit mobile version